ಡಾ. ಮಂಗಳಾ ಪ್ರಿಯದರ್ಶಿನಿ ಕಣ್ಣಲ್ಲಿ ನನ್ನ "ಶೇಕ್ಸಪಿಯರನ ಶ್ರೀಮತಿ" ನಾಟಕದ ವಿಮರ್ಶೆ
ನಾಲ್ಕು ದಿನಗಳ ಹಿಂದೆ ದಾವಣಗೆರೆಯಿಂದ ಉದಯ್ ಇಟಗಿಯವರು ತಮ್ಮ “ಶೇಕ್ಸ್ ಪಿಯರನ ಶ್ರೀಮತಿ” ನಾಟಕದ ಪ್ರಯೋಗವಾಗುತ್ತಿದ್ದು, ನಾನು ಬರಲೇಬೇಕೆಂಬ ಪ್ರೀತಿಯ ಒತ್ತಾಯವನ್ನು ಹೇರಿದ್ದೇ ಅಲ್ಲದೆ ಮನೆಗೇ ಬಂದು ಕರೆದುಕೊಂಡು ಹೋಗುವುದಾಗಿ ಹೇಳಿದರು. ಇದಕ್ಕೆ ಕಾರಣ, ಇಟಗಿಯವರ ಈ ಕೃತಿಯನ್ನು ಪ್ರಕಟಣೆಗೆ ಮೊದಲೇ ಪಿಡಿಎಫ್ನಲ್ಲಿಯೇ ಓದಿ ಮೆಚ್ಚಿದ್ದ ಮೊದಮೊದಲ ಓದುಗಳಾಗಿದ್ದೆ. ಈಗ ರಂಗ ಪ್ರದರ್ಶನವನ್ನು ನೋಡಬೇಕೆಂಬ ಆಸೆಯೂ ಇದ್ದು, ಅದಾಗಲೇ ರಂಗಶಂಕದಲ್ಲಿ ಪ್ರದರ್ಶನಗೊಂಡು ದಾವಣಗೆರೆಯನ್ನೂ ಒಳಗೊಂಡಂತೆ ಅನೇಕ ಕಡೆಗಳಲ್ಲಿ ಪ್ರದರ್ಶನಗಳನ್ನು ಕಂಡು ಪ್ರೇಕ್ಷಕರ ಮನ ಗೆದ್ದ ನಾಟಕವಾಗಿತ್ತು. ಇಟಗಿಯವರ ಈ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸುತ್ತ ಶನಿವಾರ ವರ್ಲ್ಡ್ ಕಲ್ಚರ್ಗೆ ಉತ್ಸಾಹದಿಂದಲೇ ಹೊರಟಿದ್ದೆ.
ಈ ನಾಟಕ ಏಕ ವ್ಯಕ್ತಿ ಪ್ರದರ್ಶನವಾಗಿದ್ದು ನಾಯಕಿ, ಕನ್ನಡದ ಅಪ್ರತಿಮ ಅಭಿನೇತ್ರಿ ಶ್ರೀಮತಿ ಲಕ್ಷ್ಮಿ ಚಂದ್ರ ಶೇಖರ್ ಅವರು. ಯಾವ ಪಾತ್ರವನ್ನು ಕೊಟ್ಟರೂ ಪರಕಾಯ ಪ್ರವೇಶ ಮಾಡಿ ತಾವೇ ಆ ಪಾತ್ರವಾಗಿಬಿಡುವ ನಟಿ. ಗೃಹಭಂಗದ ಗಂಗಮ್ಮ, ಮಾಯಾಮೃಗದ ಶಾಸ್ತ್ರಿಗಳ ಮುಗ್ಧ ಹೆಂಡತಿ …. ಇಲ್ಲಿ ಅವರನ್ನು ಶೇಕ್ಸ್ಯರನ ಹೆಂಡತಿಯಾಗಿ ನೋಡುವ ಕೂತೂಹಲವಿತ್ತು .
ಎನ್ ಎಂ ಕೆ ಆರ್ ವಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕಿಯೇ ಆಗಿದ್ದ ಲಕ್ಷ್ಮೀ ಅವರಿಗೆ ಶೇಕ್ಸ್ ಪಿಯರನ ಬಗೆಗೆ ಪ್ರವೇಶಿಕೆ ಇರುವುದರಿಂದ ಈ ಪಾತ್ರವನ್ನು ಅತ್ಯಂತ ನಿಖರವಾಗಿ ನಿರೂಪಿಸುವರೆಂಬ ನಿರೀಕ್ಷೆ ನನ್ನಂತೆ ತುಂಬಿದ ಗೃಹದಲ್ಲಿ ಕುಳಿತಿದ್ದ ಎಲ್ಲ ಪ್ರೇಕ್ಷಕರಿಗೂ ಇದ್ದದ್ದೆ.
ಈ ನಾಟಕದಲ್ಲಿ ಇರುವುದು ಒಂದೇ ಪಾತ್ರ. ಅದು ಶೇಕ್ಸ ಪಿಯರನ ಹೆಂಡತಿ ಆನಾ ಹ್ಯಾಥ್ ವೇ ಳದು. ಒಂದೇ ಅಂಕದಲ್ಲಿ ಅಡೆ ತಡೆಯಿಲ್ಲದೆ, ಹೆಚ್ಚು ಪ್ರಸಾದನಗಳಿಲ್ಲದೆ, ಒಂದೇ ಓಘದಲ್ಲಿ ಓಡುವ ನಾಟಕದಲ್ಲಿ ಶೇ ಕ್ಸ್ ಪಿಯರನ ಹೆಂಡತಿಯ ಪಾತ್ರದಲ್ಲಿ ಅವನ ಬದುಕು, ಬರಹಗಳ ಬಗೆಗೆ ಬದುಕಿನ ಸಂಜೆಯಲ್ಲಿ ಬಹು ಹತ್ತಿರದಿಂದ ಕಂಡ ಆತನ ಹೆಂಡತಿಯ ಸ್ವಗತಗಳಲ್ಲಿಯೇ ನಾಟಕ ಪ್ರಾರಂಭವಾಗುತ್ತದೆ. ಇದು ಸ್ತ್ರೀ ವಾದೀ ನೆಲೆಯಿಂದ ಶೇಕ್ಸ್ ಪಿಯರ್ ನನ್ನು ವ್ಯಾಖ್ಯಾನಿಸುವ ನಾಟಕವೂ ಆಗಿದೆ.
ಹದಿನೆಂಟು ವರ್ಷದ ಶೇಕ್ಸ್ ಪಿಯರ್ ಇಪ್ಪತ್ತಾರು ವರ್ಷದ ಆನೆ ಹ್ಯಾಥ್ ಳ ಪ್ರೇಮಕ್ಕೆ, ಅವಳೇ ಹೇಳಿಕೊಳ್ಳುವಂತೆ ಕಾಮಕ್ಕೆ ಬಿದ್ದು ಆಕೆ ಮದುವೆಗೆ ಮುಂಚೆ ಬಸಿರಾದದ್ದು, ಮನೆಯವರು ಪಂಚಾಯಿತಿ ಸೇರಿಸಿ ಮದುವೆ ಮಾಡಿದ್ದ್ದು, ಮೂರು ಮಕ್ಕಳು, ಈತ ಮನೆ ಬಿಟ್ಟು ಲಂಡನ್ನಿಗೆ ಬಂದದ್ದು, ಅಲ್ಲಿ ತೆರೆಯ ಹಿಂದೆ ಪಾತ್ರಗಳಿಗೆ ಮಾತು ಹೇಳಿಕೊಡುವ ಉದ್ಯೋಗ ಹಿಡಿದದ್ದು, ತಾನೇ ಕಷ್ಟ ಪಟ್ಟು ದುಡಿಯುತ್ತಾ ಮಕ್ಕಳಲ್ಲದೆ ಅತ್ತೆ, ಮಾವಂದಿರನ್ನೂ ಸಲಹಿದ್ದು, ಅವಳಿ ಮಕ್ಕಳಲ್ಲಿ ಒಬ್ಬ ಮಗ ಹನ್ನೊಂದು ವರ್ಷಕ್ಕೆ ತೀರಿಕೊಂಡದ್ದು, ಗಂಡನ ಸುಳಿವೇ ಇಲ್ಲದಂತೆ ಒಂಟಿಯಾಗಿ ಬದುಕಿದ್ದು, ಆಗೀಗ ಬರುವ ಪತ್ರಗಳೇ ಅವಳನ್ನು ಬದುಕಿಸಿದ್ದು, ಲಂಡನ್ನಿನಲ್ಲಿ ಅವನ ಇತರೆ ಹೆಣ್ಣುಗಳ ಸಹವಾಸ, ಅಲ್ಲೊಬ್ಬ ಗೆಳೆಯನ ಸಹವಾಸ, ಕೊನೆಗೆ ಖಾಯಿಲೆ ಅಂಟಿಸಿಕೊಂಡು ಮನೆಗೆ ಬಂದು ತನ್ನ ಐವ್ವತ್ತೆರಡನೆಯ ವಯಸ್ಸಿನಲ್ಲಿ ಸಾಯುವುದು …. ಈ ಎಲ್ಲ ವಿವರಗಳನ್ನು ಪ್ರೇಕ್ಷಕರ ಮುಂದೆ ಆತ್ಮೀಯವಾಗಿ ಹಂಚಿಕೊಳ್ಳುತ್ತಾಳೆ. ಶೇಕ್ಸ್ ಪಿಯರ್ ಜಗತ್ತಿನ ಅತ್ಯಂತ ಶ್ರೇಷ್ಠ, ಪ್ರಸಿದ್ಧ ನಾಟಕಕಾರ ಎಂದು ಬಗೆದ ಲೋಕಕ್ಕೆ, ಪರಿಚಯವಿಲ್ಲದ ಶೇಕ್ಸ್ ಪಿಯರನ ಇನ್ನೊಂದು ಮುಖವನ್ನು ಅನಾವರಣಗೊಳಿಸುತ್ತಾ ಹೋಗುವ ಆನಾ, ಮುಗ್ಧವಾಗಿ ತನ್ನನ್ನು ಅವನ ವ್ಯಕ್ತಿತ್ವದ ಪಕ್ಕ ಪಕ್ಕದಲ್ಲಿಟ್ಟು ಅವನಿಗೆ ತಕ್ಕ ಹೆಂಡತಿ ನಾನಾಗಿದ್ದೆನೆ? ಎಂದು ಪ್ರಾಮಾಣಿಕವಾಗಿ ಪ್ರಶ್ನಿಸಿಕೊಳ್ಳುತ್ತಾಳೆ.
ಗಂಡ ಪ್ರೇಮ ಕವನಗಳನ್ನು ಬರೆದಿದ್ದು ತನಗೆ ಎಂದು ಭಾವಿಸಿಕೊಂಡಿರುವಾಗಲೇ ಅದು ಬರೆದದ್ದು ಅವನ ಗೆಳೆಯನಿಗೆ ಎಂದು ಗೊತ್ತಾದಾಗ, ನನ್ನ ವೈರು ಕೂದಲನ್ನು ಯಾರು ಮೆಚ್ಚುತ್ತಾರೆ ಎಂದು ಸಮಾಧಾನವಾಗಿಯೇ ಕಟು ವಾಸ್ತವವನ್ನು ಸ್ವೀಕರಿಸುತ್ತಾಳೆ. ಅನಾಳಲ್ಲಿ ಗಂಡನ ಬಗೆಗೆ ಎಲ್ಲೂ ವಿಷಾದವಿಲ್ಲ, ಬೇಸರವಿಲ್ಲ. ಬದುಕನ್ನು ಬಂದ ಹಾಗೇ ಸ್ವೀಕರಿಸುವ ಮನೋಭಾವವಿದೆ. ಇದೆಲ್ಲದರ ನಡುವೆ ಪ್ರಖ್ಯಾತರ ಹೆಂಡಂದಿರ ಪಾಡೇ ಇಷ್ಟು, ಎಂಬ ತಾತ್ವಿಕ ನಿರ್ಲಿಪ್ತತೆ ಇದೆ.
ಒಂದೂವರೆ ಗಂಟೆ ನಿರರ್ಗಳವಾಗಿ ಮಾತನಾಡುವ ನಟಿ ನಮಗೆ ಪರಿಚಯವಿಲ್ಲದ ಹಾಗೂ ಇರುವ ಶೇಕ್ಸ್ ಪಿಯರನನ್ನು ಅದ್ಭುತವಾಗಿ ವ್ಯಾಖ್ಯಾನಿಸುತ್ತಾರೆ. ವೇದಾಂತಿಯಂತೆ ಇಹದ ಬದುಕಿನ ಕಾಯಕದೊಳಗೆ ಒಬ್ಬಳೇ ದುಡಿಯುತ್ತ ಅದರೊಳಗೇ ತನ್ನ ದುಃಖಗಳನ್ನು ಮರೆಯುವ ಆನಾಳನ್ನು ಆಪ್ತವಾಗಿಸುತ್ತಾರೆ. ಎಲ್ಲೋ ಒಂದು ಕಡೆ ಅವಳ ಬಗ್ಗೆ ಕನಿಕರ ಉಂಟಾಗದೆ ಇರುವುದಿಲ್ಲ. ಲಕ್ಷ್ಮಿ ಅವರ ಅಭಿನಯ ನಾಟಕಕ್ಕೆ ಜೀವ ತುಂಬುವಂತಹದು. ಶೇಕ್ಸ್ ಪಿಯರನ ಹಸಿರು ಕೋಟಿನೊಂದಿಗೆ ಮಾತನಾಡುವುದು, ‘ಅವನ ತಲೆ ಮೇಲೆ ಮೊಟುಕಿದೆ’ ಎಂದು ಹೇಳುತ್ತಾ ಆತ ಎಷ್ಟಾದರೂ ತನಗಿಂತ ಚಿಕ್ಕವನು ಎಂದು ಹೆಮ್ಮೆ ಪಡುವ ಭಾವವನ್ನು ಹೇಳುವಲ್ಲಿ ಲಕ್ಷ್ಮಿ ಅವರ ಅಭಿನಯ ಪರಕಾಷ್ಠತೆಯನ್ನು ಮುಟ್ಟುತ್ತದೆ . ಶೇಕ್ಸ್ ಪಿಯರನ ಕಾಲದ ಹಿನ್ನೆಲೆ ಸಂಗೀತ , ವಸ್ತ್ರ ವಿನ್ಯಾಸ , ರಂಗ ಸಜ್ಜಿಕೆ , ಪ್ರಾಪ್ಸ್ - ಬಕೆಟ್ಟಿನಿಂದ ಹಿಡಿದು ಲಂಡನ್ ಬ್ರಿಡ್ಜ್ ವರೆಗೆ ತುಂಬ ಅಥೆಂಟಿಕ್ ಆಗಿದೆ.
ಲಕ್ಷ್ಮೀ ಚಂದ್ರ ಶೇಖರ್ ಅಂತಹ ಅಮೋಘ ನಟಿ , ನಮ್ಮ ಕನ್ನಡದ ನಟಿ ಎಂದು ಗರ್ವದಿಂದ ಹೇಳುವಲ್ಲಿ ಹೆಮ್ಮೆಯ ಕೋಡು ಮೂಡುತ್ತದೆ. ಲಕ್ಷ್ಮಿಯವರ ಮತ್ತೊಂದು ಸಾಧನೆ ಎಂದರೆ ಇದೇ ನಾಟಕದ ಇಂಗ್ಲೀಷ್ ಅವತರಣಿಕೆಯಲ್ಲೂ ಅಷ್ಟೇ ನಿರ್ಗಳವಾಗಿ ಅಭಿನಯಿಸುವುದು, ಅದೂ ಕನ್ನಡ ನಾಟಕ ಪ್ರದರ್ಶನವಾದ ಅರ್ಧ ಗಂಟೆಯಲ್ಲೇ. ಅವರ ಅಸಾಧಾರಣ ನೆನಪಿನ ಶಕ್ತಿ, ರಂಗ ನಿರ್ವಹಣೆ ಅನನ್ಯವಾದುದು.
ಇಂಥ ಆಕರ್ಷಕ ವಸ್ತುವನ್ನು ಕನ್ನಡಕ್ಕೆ ತಂದುಕೊಟ್ಟ ಉದಯ್ ಇಟಗಿಯವರಿಗೆ ಹಾರ್ದಿಕ ಅಭಿನಂದನೆಗಳು.
ಈ ನಾಟಕವನ್ನು ಹೆಚ್ಚು ಹೆಚ್ಚು ಅಭಿಮಾನಿಗಳು ನೋಡಿ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು.
- ಡಾ ಮಂಗಳಾ ಪ್ರಿಯದರ್ಶಿನಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
ಸಿನಿಮಾ ಮತ್ತು ಸಮಾಜ2 ವಾರಗಳ ಹಿಂದೆ
-
“ಕಾಂತಾರ ಚಾಪ್ಟರ್ ೧” ಸಿನಿಮಾ ಕುರಿತು…5 ವಾರಗಳ ಹಿಂದೆ
-
-
-
ತರಚೀ ಪುಷ್ಪೋಪಾಖ್ಯಾನ4 ತಿಂಗಳುಗಳ ಹಿಂದೆ
-
ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತಾ …10 ತಿಂಗಳುಗಳ ಹಿಂದೆ
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ1 ವರ್ಷದ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!2 ವರ್ಷಗಳ ಹಿಂದೆ
-
Pic by Hengki Lee4 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು5 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು6 ವರ್ಷಗಳ ಹಿಂದೆ
-
ಹೊಸ ದಿನ6 ವರ್ಷಗಳ ಹಿಂದೆ
-
The story of telling a story!6 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 27 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!7 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ7 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?7 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!7 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್7 ವರ್ಷಗಳ ಹಿಂದೆ
-
ಮಾಯೆ8 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ8 ವರ್ಷಗಳ ಹಿಂದೆ
-
ಅನುಸಂಧಾನ-೩8 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ10 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್10 ವರ್ಷಗಳ ಹಿಂದೆ
-
ಕತ್ತಲೆ.................10 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..10 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ10 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ10 ವರ್ಷಗಳ ಹಿಂದೆ
-
ಪಡಖಾನೆಯ ಹುಡುಗಿ: ನಗು ಮತ್ತು ಸರಳ ಬದುಕು10 ವರ್ಷಗಳ ಹಿಂದೆ
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...11 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ11 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ11 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ12 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?12 ವರ್ಷಗಳ ಹಿಂದೆ
-
ತೀರ....12 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ12 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?12 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ13 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)13 ವರ್ಷಗಳ ಹಿಂದೆ
-
(ಮಹಿಳಾ)ವಾದ:13 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ13 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…13 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ13 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ14 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್14 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫15 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು15 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು15 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧15 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ15 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ16 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು16 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು16 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?16 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...18 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- “ಲಿಬಿಯಾ ಡೈರಿ” ಪುಸ್ತಕದ ಒಂದು ಸಂವಾದ ಕಾರ್ಯಕ್ರಮ
- ಇಂಗ್ಲೀಷ್ ಅಧ್ಯಾಪಕರೇಕೆ ಇಂಗ್ಲೀಷಿನಲ್ಲಿ ಬರೆಯುವದಿಲ್ಲ?
- ನನ್ನ ಏಕವ್ಯಕ್ತಿ ನಾಟಕ 'ಶೇಕ್ಸ್ ಪಿಯರನ ಶ್ರೀಮತಿ' ಕುರಿತು ಮಮತಾ ಅರಸೀಕೆರೆಯವರ ವಿಮರ್ಶೆ
- ನೆರಳು ಕೊಟ್ಟವರನ್ನು ನೆನೆಯುತ್ತಾ....................
- ನಾ ಕಂಡಂತೆ ಬೇಂದ್ರೆಯವರ "ಹುಬ್ಬಳ್ಳಿಯಾಂವಾ"
- Father
- ನಾನು LKG ಯಲ್ಲಿದ್ದಾಗ......
- ನಾವು ಯಾರ್ಯಾರು ಭೃಷ್ಟಾಚಾರ ಮಾಡಿದ್ದೇವೋ ಅವರೆಲ್ಲಾ ಸ್ವಇಚ್ಛೆಯಿಂದ ವಿಷ ತಗೊಂಡು ಸತ್ತುಹೋಗಿಬಿಡೋಣ.......
- It is just a visual poetry of Shakespeare's as well as his wife Anna Hathway's life.
- ಮಳೆಯಲ್ಲಿ ಸಿಕ್ಕ ಅವರಿಬ್ಬರು. .........
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.
0 ಕಾಮೆಂಟ್(ಗಳು):
ಕಾಮೆಂಟ್ ಪೋಸ್ಟ್ ಮಾಡಿ