Lalleshwari
17 ಗಂಟೆಗಳ ಹಿಂದೆ
ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು.
0 ಕಾಮೆಂಟ್(ಗಳು):
ಕಾಮೆಂಟ್ ಪೋಸ್ಟ್ ಮಾಡಿ